ನವದೆಹಲಿ: ಈರುಳ್ಳಿಯ ಉತ್ಪಾದನೆ ಹಾಗೂ ಬೇಡಿಕೆಯ ಮಧ್ಯೆ ಮಾರುಕಟ್ಟೆಯಲ್ಲಿ ಉಂಟಾಗಿರುವ ಅಂತರವೇ ಬೆಲೆ ಏರಿಕೆಗೆ ಪ್ರಮುಖ ಕಾರಣವಾಗಿದೆ ಎಂದು ಕೇಂದ್ರ ಗ್ರಾಹಕ ವ್ಯವಹಾರ ಹಾಗೂ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸಚಿವ ರಾಮವಿಲಾಸ್ ಪಾಸ್ವಾನ್ ಹೇಳಿದ್ದಾರೆ.

ಮಳೆ ಹಾಗೂ ಪ್ರವಾಹದಿಂದಾಗಿ ಅನೇಕ ಕಡೆ ಈರುಳ್ಳಿ ಬೆಳೆ ನಾಶವಾಗಿದ್ದು, ನವೆಂಬರ್ ತಿಂಗಳ ಅಂತ್ಯದ ವೇಳೆಗೆ ಇದರಿಂದ ಪರಿಹಾರ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ. ರಾಜಧಾನಿ ದೆಹಲಿಯಲ್ಲಿ ಈರುಳ್ಳಿ ಬೆಲೆ ಕೆಜಿಗೆ 100 ರೂ ಆಗಿದೆ. ಆದ್ರೆ ಇದಕ್ಕೆ ಪರಿಹಾರ ನವಂಬರ್ ತಿಂಗಳ ಕೊನೆಗೆ ಎಲ್ಲವೂ ಸರಿಹೋಗಲಿದೆ ಎಂದು ಹೇಳಿದ್ದಾರೆ.