ಬೆಂಗಳೂರು: ಕೊರೋನಾ ಬಿಕ್ಕಟ್ಟಿನಿಂದಾಗಿ ಸದ್ಯ ಅವಧಿ ಪೂರ್ಣಗೊಳ್ಳುತ್ತಿರುವ ರಾಜ್ಯದ 2 ಪದವೀಧರ, 2 ಶಿಕ್ಷಕರ ಕ್ಷೇತ್ರದ ಪರಿಷತ್ ಚುನಾವಣೆಯನ್ನು ತಾತ್ಕಾಲಿಕವಾಗಿ ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಜೂ.30ರವರೆಗೆ ಲಾಕ್​ಡೌನ್ ​ಇದ್ದು, ಕೊರೋನಾ ನಿಯಂತ್ರಣಕ್ಕಾಗಿ ಹೆಚ್ಚು ಜನ ಸೇರದಂತೆ ನಿರ್ಬಂಧ ವಿಧಿಸಲಾಗಿದೆ. ಹೀಗಾಗಿ ಚುನಾವಣೆ ನಡೆಸಲು ಇದು ಸೂಕ್ತ ಸಮಯವಲ್ಲ ಎಂದು ಆದೇಶದಲ್ಲಿ ಚುನಾವಣಾ ಆಯೋಗ ಉಲ್ಲೇಖಿಸಿದೆ.