ಬೆಂಗಳೂರು: ಮೆಡಿಕಲ್‌ ಹಾಗೂ ಎಂಜಿನಿಯರಿಂಗ್‌ ಪ್ರವೇಶಕ್ಕಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸಿಇಟಿ ಪರೀಕ್ಷೆಗಳು ಈ ಹಿಂದೆ ನಿಗದಿಯಾಗಿದ್ದಂತೆ ಜುಲೈ 30 ಹಾಗೂ 31 ರಂದು ನಡೆಯಲಿವೆ ಎಂದು  ಉನ್ನತ ಶಿಕ್ಷಣ ಸಚಿವ ಡಾ. ಸಿ.ಎನ್.‌ ಅಶ್ವಥನಾರಾಯಣ ಸಾಮಾಜಿಕ ಜಾಲತಾಣ ಟ್ವಿಟ್ಟರ್‌ ಮೂಲಕ ಈ ಮಾಹಿತಿ ನೀಡಿದ್ದಾರೆ.

ಇದಕ್ಕೆ ಬೇಕಾದ ಎಲ್ಲ ಸಿದ್ಧತೆ ಮಾಡಿಕೊಳ್ಳುವಂತೆ ಸಿಇಟಿ ಘಟಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅವರು ಈ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದಾರೆ ಎಂದು ಸಚಿವರು ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ

ಪಿಜಿ‌ ಸಿಇಟಿ ಆಗಸ್ಟ್ 8 ಮತ್ತು 9 ನಡೆಯಲಿದೆ.‌ ಆಗಸ್ಟ್ 9 ರಂದು ಡಿಪ್ಲೋಮಾ ‌ಸಿಇಟಿ‌ ನಡೆಯಲಿದೆ ಹಾಗೂ ಕೆ-ಸೆಟ್ ಪರೀಕ್ಷೆಗಳ‌ ಬಗ್ಗೆ ಇನ್ನೂ ತೀರ್ಮಾನ ಆಗಿಲ್ಲ ಎಂದು ಅವರು ತಿಳಿಸಿದ್ದಾರೆ.