ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್; ಹವಾಮಾನ ಇಲಾಖೆ.
ಬೆಂಗಳೂರು; ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿಯಲ್ಲಿ ಇಂದಿನಿಂದ ನಾಲ್ಕು ದಿನಗಳವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ನಾಲ್ಕು ಜಿಲ್ಲೆಗಳಾದ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಉತ್ತರಕನ್ನಡ, ದಕ್ಷಿಣಕನ್ನಡ, ಉಡುಪಿ, ಬಳ್ಳಾರಿ, ಬೆಂಗಳೂರು, ಬೆಂಗಳೂರು (ಗ್ರಾ), ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಹಾಗೂ ತುಮಕೂರು ಜಿಲ್ಲೆಗಳಲ್ಲಿ 3 ದಿನ ಭಾರಿ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.