ಬೆಂಗಳೂರು :, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಐದು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ..

ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಜುಲೈ 16 ರವರೆಗೆ ಭಾರೀ ಮಳೆ ಆಗಲಿದೆ. ತುಮಕೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ರಾಮನಗರ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.