ಚಿಕ್ಕಮಗಳೂರು: ಜೂ.8ರಿಂದ ದೇಗುಲಗಳನ್ನು ತೆರೆಯಲು ರಾಜ್ಯ ಸರ್ಕಾರ ಅವಕಾಶ ನೀಡಿದ್ದರೂ, ಚಿಕ್ಕಮಗಳೂರು ಜಿಲ್ಲೆಯ ಹೊರನಾಡು ಅನ್ನಪೂರ್ಣೇಶ್ವರಿ ದೇಗುಲದ ಭಕ್ತರಿಗೆ ಸದ್ಯ ದೇವರ ದರ್ಶನದ ಭಾಗ್ಯವಿಲ್ಲ.

ಕೊರೋನಾ ಸೋಂಕು ತಡೆಗಟ್ಟಲು ದೇಗುಲದಲ್ಲಿ ಅಗತ್ಯ ವ್ಯವಸ್ಥೆಗಳನ್ನು ಮಾಡಿಕೊಳ್ಳಲು ಹೆಚ್ಚಿನ ಕಾಲಾವಕಾಶ ಬೇಕಿರುವುದರಿಂದ ದೇವರ ದರ್ಶನ, ಪೂಜೆ ಮತ್ತು ವಾಸ್ತವ್ಯದ ಅವಕಾಶಗಳನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.