ಬೆಂಗಳೂರು: ರಾಜ್ಯಕ್ಕೆ ಇನ್ನೆರಡು ದಿನಗಳಲ್ಲಿ ಮಳೆ ಬಿರುಸುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಜೂನ್ 11 ರಿಂದ 13 ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆ ಪ್ರಮಾಣ ಕಡಿಮೆಯಾಗಲಿದೆ ಎನ್ನಲಾಗಿದೆ.