ಬೆಂಗಳೂರು :  ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿಯೊಂದನ್ನು ನೀಡಿದ್ದು, ಜುಲೈ 30 ಮತ್ತು 31 ರಂದು ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ನಡೆಯಲಿದೆ .

ಜುಲೈ 30 ಮತ್ತು 31 ರಂದು ರಾಜ್ಯಾದ್ಯಂತ 497 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಸಜ್ಜುಗೊಳಿಸಲಾಗಿದೆ. ಕೊರೊನಾ ಮಧ್ಯೆಯೇ ಆರೋಗ್ಯ ಇಲಾಖೆ ನೀಡಿರುವ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು ಅನುಸರಿಸುವ ಮೂಲಕ ಪರೀಕ್ಷೆ ನಡೆಸಲು ಕೆಇಎ ಸಿದ್ಧತೆ ನಡೆಸಿದೆ.

ಈ ಬಾರಿ ರಾಜ್ಯಾದ್ಯಂತ 1,94,356 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆ 10.30 ರಿಂದ 11.50 ರವರೆಗೆ ಹಾಗೂ ಮಧ್ಯಾಹ್ನ 2.30 ರಿಂದ 3.30 ರವರೆಗೆ ನಡೆಯಲಿದೆ ಎಂದು ಕೆಇಎ ಮಾಹಿತಿ ನೀಡಿದೆ.

(ಸಾಂದರ್ಭಿಕ ಚಿತ್ರ)