ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿ ಸಾರ್ವತ್ರಿಕ ವರ್ಗಾವಣೆ ಮಾಡದಿರಲು ರಾಜ್ಯ ಸರ್ಕಾರ ತೀರ್ಮಾನಿಸಿದೆ.

ಮಿತವ್ಯಯ ಸಾಧಿಸುವ ಉದ್ದೇಶದಿಂದ ಹಾಗೂ ವರ್ಗಾವಣೆಯಿಂದಾಗಿ ಕೊರೊನಾ ಕರ್ತವ್ಯಕ್ಕೆ ತೊಂದರೆಯಾಗಬಹುದೆಂಬ ಕಾರಣಕ್ಕೆ ಸಾರ್ವತ್ರಿಕ ವರ್ಗಾವಣೆ ನಡೆಸದಿರಲು ತೀರ್ಮಾನಿಸಲಾಗಿದ್ದು, ವಿಶೇಷ ಪ್ರಕರಣಗಳಲ್ಲಿ ಮಾತ್ರ ಮುಖ್ಯಮಂತ್ರಿಗಳ ಅನುಮೋದನೆಯೊಂದಿಗೆ ವರ್ಗಾವಣೆ ಮಾಡಲು ನಿರ್ಧರಿಸಲಾಗಿದೆ.!