ಬೆಂಗಳೂರು : ಮುಂದಿನ ನಾಲ್ಕೈದು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂ. 14 ಮತ್ತು 15 ರಂದು 115 ಮಿ.ಮೀ ನಿಂದ 204 ಮಿ.ಮೀ ವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಲ್ಲಿ ಆರೇಂಜ್ ಅಲರ್ಟ್ ಎಚ್ಚರಿಕೆ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮಲೆನಾಡು ಭಾಗದ ಜಿಲ್ಲೆಗಳಲ್ಲಿ ಉತ್ತಮ ಮಳೆ ಹಾಗೂ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.