ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೇಂದ್ರ ಚುನಾವಣಾ ಆಯೋಗಕ್ಕೆ ಪತ್ರ ಬರೆದು ಈ ಮೂರು ಕ್ಷೇತ್ರಗಳಿಗೆ ವಿಶೇಷ ವೀಕ್ಷಕರ ನೇಮಕಮಾಡುವಂತೆ ಮನವಿಮಾಡಿದ್ದಾರೆ.

ಆ ಮೂರು ಕ್ಷೇತ್ರಗಳು ಯಾವವು ಅಂದರೆ, ತುಮಕೂರು, ಹಾಸನ ಹಾಗೂ ಮಂಡ್ಯ ಲೋಕಸಭಾ ಕ್ಷೇತ್ರಗಳಿಗೆ ಕೇಂದ್ರೀಯ ವಿಶೇಷ ವೀಕ್ಷಕರನ್ನು ನೇಮಿಸುವಂತೆ ಮನವಿ ಮಾಡಿದ್ದಾರೆ.

ಪತ್ರದಲ್ಲಿ ಸೂಚಿಸಿರುವ ಕ್ಷೇತ್ರಗಳಲ್ಲಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಸ್ಥರು ಸ್ಪರ್ಧಿಸಿರುವ ಪರಿಣಾಮ ಸಾಕಷ್ಟು ಹಣ ಹರಿದಾಡುವ ಸಾಧ್ಯತೆ ಇದೆ. ಅಲ್ಲದೆ ಚುನಾವಣಾ ನೀತಿ-ನಿಯಮಗಳನ್ನು ಗಾಳಿಗೆ ತೂರಬಹುದು ಎಂದು ಅವರು ಶಂಕೆ ವ್ಯಕ್ತಪಡಿಸಿದ್ದಾರೆ.