ನವದೆಹಲಿ: ಉತ್ತರ ಪ್ರದೇಶದ ಈಶಾನ್ಯ ಭಾಗದಲ್ಲಿ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಮುಂದಿನ ಎರಡು ದಿನಗಳಲ್ಲಿ ಉತ್ತರ ಭಾರತದ ಹಲವು ರಾಜ್ಯಗಳಲ್ಲಿ ಉಷ್ಣಾಂಶ 47 ಡಿಗ್ರಿ ದಾಟಲಿದೆ.

ಚತ್ತೀಸಗಡ, ಒಡಿಶಾ, ಗುಜರಾತ್, ಮಧ್ಯ ಮಹಾರಾಷ್ಟ್ರ ಮತ್ತು ವಿದರ್ಭ, ಆಂಧ್ರಪ್ರದೇಶದ ಕರಾವಳಿ ಭಾಗ, ಯಾಣ, ರಾಯಲಸೀಮಾ ಮತ್ತು ಕರ್ನಾಟಕದ ಉತ್ತರ ಒಳನಾಡು ಪ್ರದೇಶಗಳ ಅಲ್ಲಲ್ಲಿ ಮುಂದಿನ 3-4 ದಿನಗಳಲ್ಲಿ ಬಿಸಿಗಾಳಿಯ ಬೀಸಲಿದೆ.

ಈ ಬಾರಿಯ ಬೇಸಿಗೆಯಲ್ಲಿ ಇದೇ ಮೊದಲ ಬಾರಿಗೆ ಉಷ್ಣಾಂಶ ಏರಿಕೆಯಿಂದಾಗಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ,’ ಎಂದು ಐಎಂಡಿಯ ಪ್ರಾದೇಶಿಕ ಹವಾಮಾನ ಇಲಾಖೆಯ ಮುಖ್ಯಸ್ಥ ಕುಲ್‌ದೀಪ್‌ ಶ್ರೀವಾಸ್ತವ್‌ ತಿಳಿಸಿದ್ದಾರೆ.