ಬೆಂಗಳೂರು:14 ಕ್ಷೇತ್ರಗಳು : ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್, ಕೊಪ್ಪಳ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಶಿವಮೊಗ್ಗ, ಬಳ್ಳಾರಿ. ಈ 14 ಕ್ಷೇತ್ರಗಳಲ್ಲಿ ಏಪ್ರಿಲ್ 23ರಂದು ಚುನಾವಣೆ ನಡೆಯಲಿದ್ದು, ಮೇ 23ರಂದು ಚುನಾವಣಾ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ.

ಈಗಾಗಲೇ ರಾಜಕೀಯ ಪಕ್ಷಗಳು ಅಭ್ಯರ್ಥಿಗಳನ್ನು ಘೋಷಣೆ ಮಾಡಿದ್ದು ಗುರುವಾರದಿಂದಲೇ ಅವರು ನಾಮಪತ್ರಗಳನ್ನು ಸಲ್ಲಿಸಬಹುದಾಗಿದೆ.

ಏಪ್ರಿಲ್ 23ರಂದು ಮತದಾನ ನಡೆಯಲಿದ್ದು, ಏಪ್ರಿಲ್ 5ರಂದು ನಾಮಪತ್ರಗಳನ್ನು ಪರಿಶೀಲನೆ ನಡೆಸಲಾಗುತ್ತದೆ. ನಾಮಪತ್ರಗಳನ್ನು ವಾಪಸ್ ಪಡೆಯಲು ಏಪ್ರಿಲ್ 8 ಕೊನೆಯ ದಿನವಾಗಿದೆ. ಮೇ 23ರಂದು ಫಲಿತಾಂಶ ಪ್ರಕಟವಾಗಲಿದೆ.