ಬೆಂಗಳೂರು: ಇಂದಿನಿಂದ ಎರಡು ದಿನಗಳ ಕಾಲ 6 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಹೇಳಿದೆ.

ಮಲೆನಾಡು ಭಾಗದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ ಮೈಸೂರು, ಚಾಮರಾಜನಗರ ಜಿಲ್ಲೆಗಳು ಸೇರಿದಂತೆ ಹಲವೆಡೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ತುಮಕೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.