ಬೆಂಗಳೂರು : ಗರೀಬ್ ಕಲ್ಯಾಣ ಯೋಜನೆಯಡಿ ಉಚಿತವಾಗಿ ಪಡೆದ ಪಡಿತರ ಆಹಾರ ಧಾನ್ಯಗಳನ್ನು ಹಣಕ್ಕೆ ಮಾರಾಟ ಮಾಡುವವರ ಪಡಿತರ ಚೀಟಿ ರದ್ದುಪಡಿಸಲು ಕಾನೂನು ಜಾರಿಗೆ ಚಿಂತನೆ ನಡೆಸಲಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಗೋಪಾಲಯ್ಯ ಎಚ್ಚರಿಕೆ ನೀಡಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಸಚಿವ ಕೆ.ಗೋಪಾಲಯ್ಯ, ಗರೀಬ್ ಕಲ್ಯಾಣ್ ಯೋಜನೆಯಡಿ ವಿತರಿಸಲಾಗುತ್ತಿರುವ ಪಡಿತರ ಅಕ್ಕಿಯನ್ನು ಕೆಜಿಗೆ 12 ರಿಂದ 15 ರೂ.ಗಳಿಗೆ ಮಾರಾಟ ಮಾಡುತ್ತಿರುವುದು ಇಲಾಖೆ ಗಮನಕ್ಕೆ ಬಂದಿದೆ. ಹಣಕ್ಕೆ ಮಾರಾಟ ಮಾಡಿದರೆ ಅಂತವರ ರೇಷನ್ ಕಾರ್ಡ್ ರದ್ದು ಮಾಡಲಾಗುವುದು ಎಂದು ಹೇಳಿದ್ದಾರೆ.