ಉಡುಪಿ:  ಜಿಲ್ಲೆಯಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ಮುಂದಿನ 14 ದಿನಗಳವರೆಗೆ ಜಿಲ್ಲೆಯ ಗಡಿಗಳನ್ನು ಬಂದ್ ಮಾಡುತ್ತೇವೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ.

ಡಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ಅಧಿಕಾರಿಗಳು ಭಾಗವಹಿಸಿದ್ದರು. ಎಲ್ಲರೂ ಒಟ್ಟಾಗಿ ಚರ್ಚಿಸಿ ಈ ತೀರ್ಮಾನಕ್ಕೆ ಬಂದಿದ್ದೇವೆ. 14 ದಿನ ಉಡುಪಿ ಜಿಲ್ಲೆಯ ಗಡಿಭಾಗ ಬಂದ್ ಮಾಡಲು ನಿರ್ಧರಿಸಲಾಗಿದೆ. ಗಡಿ ಭಾಗ ಸೀಲ್ ಡೌನ್ ಮಾಡಲಾಗುತ್ತಿದೆ. ಭಾನುವಾರ ಮಾತ್ರ ಕಂಪ್ಲೀಟ್ ಲಾಕ್ ಡೌನ್ ಇರಲಿದೆ ಎಂದು ಹೇಳಿದ್ದಾರೆ,