ಬೆಂಗಳೂರು:  ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಹಿರಿಯ ನಾಯಕ ಎಚ್.ಕೆ. ಪಾಟೀಲ್ ಅವರನ್ನು ನೇಮಕ ಮಾಡಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ.

ನೂತನ ಸಚಿವ ಸಂಪುಟದಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಪ್ರಾತಿನಿಧ್ಯ ಸಿಗದ ಕಾರಣ ಆ ಭಾಗದ ಪ್ರಭಾವಿ ಮುಖಂಡ ಎಚ್.ಕೆ. ಪಾಟೀಲರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದರೆ ಚುನಾವಣೆಯಲ್ಲಿ ಅನುಕೂಲವಾಗಲಿದೆ ಎಂಬ ಲೆಕ್ಕಾಚಾರ ಈ ನಿರ್ಧಾರದ ಹಿಂದಿದೆ ಎಂದು ಹೇಳಲಾಗುತ್ತಿದೆ.

ಈ ಗಾಗಲೇ ಕೆ.ಪಿ.ಸಿ.ಸಿ ಅಧ್ಯಕ್ಷ ಸ್ಥಾಕ್ಕೆ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಕೇಂದ್ರ ಮಾಜಿ ಸಚಿವ ಕೆ.ಎಚ್. ಮುನಿಯಪ್ಪ, ಸಚಿವ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವರು ಆಕಾಂಕ್ಷಿಗಳಾಗಿದ್ದರೂ ಸಹ ಮುಂಬರುವ ಲೋಕಸಭಾ ಚುನಾವಣೆ ಬರಲಿದ್ದು ಲಿಂಗಾಯಿತರ ಮತವನ್ನು ಸೆಳೆಯಲು ಹಾಗೂ ಉತ್ತರ ಕರ್ನಾಟಕದವರಿಗೆ ಆಧ್ಯತೆ ನೀಡಲು ಕಾಂಗ್ರೆಸ್ ಪಕ್ಷದ ಲೆಕ್ಕಾಚಾರ ಹಾಗಾಗಿ ಎಚ್.ಕೆ. ಪಾಟೀಲ್ ಗೆ ಪಟ್ಟ ಸಿಗುವ ಸಾಧ್ಯತೆ ಹೆಚ್ಚಿದೆ ಎಂಬುದು ಕಾಂಗ್ರೆಸ್ ವಲಯದಲ್ಲಿನ ಲೆಕ್ಕಾಚಾರ.