ಬೆಂಗಳೂರು: ರಾಜ್ಯ ಸರ್ಕಾರವು 3800 ಉಪನ್ಯಾಸಕರನ್ನು ನೇಮಕ ಮಾಡಿಕೊಳ್ಳಲಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಟಿ.ದೇವೇಗೌಡ ಅವರು ನಿನ್ನೆ ತಿಳಿಸಿದ್ದಾರೆ.

ಹಣಕಾಸು ಇಲಾಖೆಯ ಅನುಮತಿ ಸಿಕ್ಕ ಬಳಿಕ ಸರ್ಕಾರಿ ಹಾಗೂ ಅನುದಾನಿತ ಕಾಲೇಜುಗಳಿಗೆ ಉಪನ್ಯಾಸಕರನ್ನು ನೇಮಕ ಮಾಡಲಾಗುವುದು. ಇದರೊಂದಿಗೆ ಬಿಎ ಪದವಿಯ ಪಠ್ಯಕ್ರಮವನ್ನು ಮೇಲ್ದರ್ಜೆಗೆ ಏರಿಸಲು ನಿರ್ಣಯ ಬಾಕಿ ಇದ್ದು, ಇಂದು ಎಲ್ಲ ವಿಶ್ವವಿದ್ಯಾಲಯಗಳ ಕುಲಪತಿಗಳ ಹಾಗೂ ಶಿಕ್ಷಣ ತಜ್ಞರ ಸಭೆ ನಡೆಸಿ ತೀರ್ಮಾನಿಸಲಾಗುವುದು ಎಂದರು.