ಬೆಂಗಳೂರು: ಉಪ ಚುನಾವಣೆಯ ರಣರಂಗಕ್ಕೆ ಬಿಜೆಪಿ ಸಕಲ ಸಿದ್ಧತೆ ನಡೆಸಿದ್ದು, ರಾಜ್ಯದ 15 ವಿಧಾನಸಭಾ ಕ್ಷೇತ್ರಗಳಿಗೆ ಬಿಜೆಪಿಯು ತನ್ನ 40 ಪ್ರಚಾರಕರ ಪಟ್ಟಿಯನ್ನು ಬಿಡುಗಡೆ ಮಾಡಿದೆ.

ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಿಎಂ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವರಾದ ಡಿ.ವಿ. ಸದಾನಂದಗೌಡ, ಪ್ರಹ್ಲಾದ್ ಜೋಷಿ, ಮೂವರು ಡಿಸಿಎಂಗಳು, ಸಂಸದರು, ವಿಧಾನ ಪರಿಷತ್ ಸದಸ್ಯರು ಹಾಗೂ ಸಚಿವರು ಸೇರಿದಂತೆ 40 ಜನ ಬಿಜೆಪಿ ನಾಯಕರು ಪಕ್ಷದ ಅಭ್ಯರ್ಥಿಗಳ ಪರ ಮತಯಾಚನೆ ಮಾಡಲಿದ್ದಾರೆ.!