ಬೆಂಗಳೂರು: ಬೆಂಗಳೂರಿನಲ್ಲಿ ಕೊರೋನಾ ಸೋಂಕು ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರವು ಇಂದು ಮತ್ತೆ 1 ವಾರ ಕಾಲ ಲಾಕ್ ಡೌನ್ ಘೋಷಿಸಿ ಅಧಿಕೃತ ಆದೇಶ ಹೊರಡಿಸಿದೆ.

ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಾತ್ರವೇ ಜು.14ರ ರಾತ್ರಿ 8 ಗಂಟೆಯಿಂದ 23ರವರೆಗೆ ಸಂಪೂರ್ಣ ಲಾಕ್ ಡೌನ್ ಇರಲಿದೆ. ಈ ವೇಳೆಯಲ್ಲಿ ಅಗತ್ಯ ವಸ್ತುಗಳ ಖರೀದಿಗೆ ಮತ್ತು ಪದವಿ, ಸ್ನಾತಕೋತ್ತರ ಪದವಿಗಳ ಪರೀಕ್ಷೆಗಳಿಗೆ ಯಾವುದೇ ತೊಂದರೆ ಇರುವುದಿಲ್ಲ ಎಂದು ಸರ್ಕಾರವು ಸ್ಪಷ್ಟಪಡಿಸಿದೆ.