ಬೆಂಗಳೂರು: ಸಚಿವ ಸ್ಥಾನದಿಂದ ವಂಚಿತರಾಗಿರುವ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ ಹಾಗೂ ಬಬಲೇಶ್ವರ ಶಾಸಕ ಎಂ.ಬಿ.ಪಾಟೀಲ್ ಕಾಂಗ್ರೆಸ್ ಪಕ್ಷದಿಂದ ಹೊರಗಡೆ ಬರಲಿ ಎಂದು ಬಸವ ಧರ್ಮ ಪೀಠಾಧ್ಯಕ್ಷೆ ಮಾತೆ ಮಹಾದೇವಿ ತಿಳಿಸಿದ್ದಾರೆ.

ನಗರದ ಪ್ರೆಸ್‌ಕ್ಲಬ್‌ನಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲಿಂಗಾಯತ ಪ್ರತ್ಯೇಕ ಧರ್ಮದ ಹೋರಾಟದಲ್ಲಿ ಎಂ.ಬಿ.ಪಾಟೀಲ್ ಮುಂಚೂಣಿಯಲ್ಲಿದ್ದರು ಎಂಬ ದುರುದ್ದೇಶದಿಂದಲೇ ಸಚಿವ ಸ್ಥಾನ ನೀಡದೇ ವಂಚಿಸಲಾಗಿದೆ. ಇದು ನಮ್ಮ ಸಮುದಾಯಕ್ಕೆ ಮಾಡಿರುವ ಅಪಮಾನವಾಗಿದೆ. ಹೀಗಾಗಿ, ಅವರು ಕಾಂಗ್ರೆಸ್ ಪಕ್ಷದಿಂದ ಹೊರಗೆ ಬರಲಿ ಎಂದು ಹೇಳಿದ್ದಾರೆ.