ಚಿತ್ರದುರ್ಗ: ಕರ್ನಾಟಕ ವಿಧಾನಸಭೆಗೆ 2018 ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ನೀತಿಸಂಹಿತೆ ಉಲ್ಲಂಘನೆ ಹಾಗೂ ಅಕ್ರಮಗಳನ್ನು ತಡೆಗಟ್ಟುವ ಬಗ್ಗೆ ಕಾರ್ಯ ನಿರ್ವಹಿಸಲು ವಿಧಾನಸಭಾ ಕ್ಷೇತ್ರವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳಾದ ವಿ.ವಿ.ಜೋತ್ಸ್ನಾ ಆದೇಶಿಸಿದ್ದಾರೆ.

ಅಧಿಕಾರಿಗಳು ಅಕ್ರಮ ಮದ್ಯ ಸಾಗಾಣಿಕೆ ಮತ್ತು ವಿತರಣೆ ಬಗ್ಗೆ, ಇತರೆ ಆಮಿಶಗಳನ್ನು ಒಡ್ಡುವ ಬಗ್ಗೆ ಹಾಗೂ ಚುನಾವಣಾ ವೆಚ್ಚಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಮಾಡುವ ಖರ್ಚಿ-ವೆಚ್ಚಗಳ ನಿರ್ವಹಣೆ ಬಗ್ಗೆಯೂ ಅಧಿಕಾರಿಗಳು ಕಾರ್ಯ ನಿರ್ವಹಿಸಲಿದ್ದಾರೆ. ಪ್ರತಿದಿನ ಜಿಲ್ಲಾಧಿಕಾರಿಗಳಿಗೆ ಅಧಿಕಾರಿಗಳು ವರದಿ ಮಾಡುವಂತೆ ಜಿಲ್ಲಾಧಿಕಾರಿಗಳು ಸೂಚಿಸಿದ್ದಾರೆ. ಅಧಿಕಾರಿಗಳ ವಿವರ ಇಂತಿದೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ನಂ.97 ಕ್ಕೆ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ಮಮತವರನ್ನು ನೋಡಲ್ ಅಧಿಕಾರಿಯಾಗಿ (ಮೊ:7624997594),

ಚಳ್ಳಕೆರೆ ವಿಧಾನಸಭಾ ಕ್ಷೇತ್ರ ನಂ.98 ಕ್ಕೆ ಕಾಲೇಜು ಶಿಕ್ಷಣ ಇಲಾಖೆಯ ಸಹಾಯಕ ಪ್ರಾಧ್ಯಾಪಕ ಮಾನಸ ಜೆ.(ಮೊ:9901615158) ಅವರನ್ನು ನೇಮಕ ಮಾಡಲಾಗಿದೆ.

ಚಿತ್ರದುರ್ಗ ವಿಧಾನಸಭಾ ಕ್ಷೇತ್ರ ನಂ.99 ಕ್ಕೆ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ಉಪನ್ಯಾಸಕರಾದ ಭಾಗ್ಯಶ್ರೀ (ಮೊ:8884708461) ಹಾಗೂ ಸಹಾಯಕ ಉಪ ಅರಣ್ಯ ಸಂರಕ್ಷಣಾಧಿಕಾರಿ (ಎ.ಸಿ.ಎಫ್) ರಾWವೇಂದ್ರರಾವ್ ಎನ್.ಎಸ್.(ಮೊ:9620089272) ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಹಿರಿಯೂರು ವಿಧಾನಸಭಾ ಕ್ಷೇತ್ರ ನಂ.100 ಕ್ಕೆ ಸಹಾಯಕ ತೋಟಗಾರಿಕ ಅಧಿಕಾರಿ ಪೂಜಿತ ಪಿ (ಮೊ:7624997577), ಪದವಿಪೂರ್ವ ಕಾಲೇಜು ಉಪನ್ಯಾಸಕರಾದ ತಿಪ್ಪೇಸ್ವಾಮಿ ಟಿ. (ಮೊ:9902836473) ಇವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಹೊಸದುರ್ಗ ವಿಧಾನಸಭಾ ಕ್ಷೇತ್ರ ನಂ.101 ಕ್ಕೆ ತಾಂತ್ರಿಕ ಶಿಕ್ಷಣ ಇಲಾಖೆ ಉಪನ್ಯಾಸಕರಾದ ಶ್ರುತಿ ಸಿ.ಎಸ್.(ಮೊ:9986469820) ಇವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಹೊಳಲ್ಕೆರೆ ವಿಧಾನಸಭಾ ಕ್ಷೇತ್ರ ನಂ.102 ಕ್ಕೆ ತೋಟಗಾರಿಕೆ ಇಲಾಖೆಯ ಸಹಾಯಕ ತೋಟಗಾರಿಕಾ ಅಧಿಕಾರಿ ರಮ್ಯ ಕೆ.ಆರ್.(ಮೊ:7624997586) ಅವರನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.