ಬೆಂಗಳೂರು; ಸಿಎಂ ಯಡಿಯೂರಪ್ಪ ಸೂಚನೆ ಮೇರೆಗೆ ಇಂದು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎಚ್. ನಾಗೇಶ್ ಅವರನ್ನು ಅಂಬೇಡ್ಕರ್ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಸ್ಥಾನ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ.

ಸಚಿವ ಸ್ಥಾನಕ್ಕೆ ರಾಜೀನಾಮೆ ಕೇಳಿದ್ದಕ್ಕೆ ಎಚ್. ನಾಗೇಶ್ ಅವರು ಸಿಎಂ ಎದುರೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದರು.

ಹೀಗಾಗಿ, ಅವರನ್ನು ಸಮಾಧಾನ ಮಾಡುವ ಸಲುವಾಗಿ ಯಡಿಯೂರಪ್ಪ ಅವರು ಸಂಪುಟ ದರ್ಜೆಯ ಸ್ಥಾನಮಾನ ನೀಡಿದ್ದಾರೆ.!