ಬೆಂಗಳೂರು: ಬಹು ವಿವಾದಿತ ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ರಾಜ್ಯಪಾಲರು ಅಂಕಿತ ಹಾಕುವುದರೊಂದಿಗೆ ಸುಗ್ರೀವಾಜ್ಞೆ ಅಧಿಕೃತವಾಗಿ ರಾಜ್ಯದಲ್ಲಿ ಜಾರಿಯಾಗಿದೆ.

ವಿಧಾನ ಮಂಡಲದ ಉಭಯ ಸದನಗಳ ಅಧಿವೇಶನ ಇಲ್ಲದಿವುದರಿಂದ ಎಪಿಎಂಸಿ ತಿದ್ದುಪಡಿ ಕಾಯಿದೆಗೆ ಸುಗ್ರೀವಾಜ್ಞೆ ಹೊರಡಿಸಲು ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿತ್ತು.

ಎಪಿಎಂಸಿ ತಿದ್ದುಪಡಿ ಕಾಯ್ದೆಗೆ ವಿರೋಧ ಪಕ್ಷಗಳಿಂದ ಭಾರಿ ವಿರೋಧ ವ್ಯಕ್ತವಾಗಿತ್ತು.

ಸುಗ್ರೀವಾಜ್ಞೆ ಜಾರಿ ಪ್ರಮುಖ ಅಂಶಗಳು
ರೈತರು ಯಾವುದೇ ಎಪಿಎಂಸಿಗಳ ಅಧೀನಕ್ಕೆ ಒಳಪಡುವುದಿಲ್ಲ.
ತಾಲ್ಲೂಕು, ಜಿಲ್ಲಾಮಟ್ಟದಲ್ಲಿ ಎಪಿಎಂಸಿಗಳಿಗೆ ಮೊದಲಿನ ಅಧಿಕಾರ ಇರುವುದಿಲ್ಲ.

ಖಾಸಗಿಯವರು ರೈತರಿಂದ ನೇರವಾಗಿ ಬೆಳೆ ಖರೀದಿಸಬಹುದು.
ತಮ್ಮಿಷ್ಟದಂತೆ ಯಾರಿಗೆ ಬೇಕಾದರೂ ಬೆಳೆ ಮಾರಬಹುದು.

ಯಾರ್ಡ್‌ ಹೊರಗೆ ನಡೆಯುವ ವಹಿವಾಟಿನ ಮೇಲೆ ನಿಯಂತ್ರಣದ ಅಧಿಕಾರ ಇರುವುದಿಲ್ಲ.