ಬೆಂಗಳೂರು  ನವೆಂಬರ್ 6 ರ ಬಳಿಕ ರಾಜ್ಯದಲ್ಲಿ ಮತ್ತೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹಿಂದೂ ಮಹಾಸಾಗರದ ಶ್ರೀಲಂಕಾ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಇದೆ. ಹೀಗಾಗಿ ರಾಜ್ಯದ ಬೆಂಗಳೂರು, ತುಮಕೂರು, ಹಾಸನ, ಮಂಡ್ಯ ಸೇರಿದಂತೆ ಕೆಲವೆಡೆ ಮೋಡಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನು ಮಹಾ ಚಂಡಮಾರುತ ಮತ್ತೆ ವಾಪಸ್ ಗುಜರಾತ್ ಹಾಗೂ ಮಹಾರಾಷ್ಟ್ರದ ಕಡೆ ಬರಲಿದ್ದು, ಇದರಿಂದ ಈ ರಾಜ್ಯಗಳಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ.