ಬೆಂಗಳೂರು : ವೇತನ ಪರಿಷ್ಕರಣೆ ಸೇರಿದಂತೆ ಇತರ ಬೇಡಿಕೆಗೆ ಆಗ್ರಹಿಸಿ ಇದೇ ತಿಂಗಳು 30, 31 ರಂದು ಅಖಿಲ ಭಾರತ ಬ್ಯಾಂಕ್ ಮುಷ್ಕರಕ್ಕೆ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಕರೆ ಕೊಟ್ಟಿದೆ.

ವೇತನ ಪರಿಷ್ಕರಣೆ ಮಾಡಬೇಕೆಂದು ಈಗಾಗಲೇ ಸಾಕಷ್ಟು ಬಾರಿ ಇಂಡಿಯನ್ ಬ್ಯಾಂಕ್ ಅಸೋಸಿಯೇಷನ್ ಜೊತೆಗೆ ಮಾತುಕತೆ ನಡೆದಿದೆ. ಆದರೆ ಯಾವುದೇ ಪ್ರಯೋಜನವಾಗಿಲ್ಲ .ಹೀಗಾಗಿ ಸರ್ಕಾರ ಮಧ್ಯ ಪ್ರವೇಶ ಮಾಡಿ ವೇತನ ಪರಿಷ್ಕರಣೆ ಮಾಡಬೇಕೆಂದು ಒತ್ತಾಯ ಮಾಡಿದ್ದಾರೆ.

9 ಯೂನಿಯನ್ ಗಳು ಸೇರಿ ಮುಷ್ಕರಕ್ಕೆ ಕರೆ ಕೊಟ್ಟಿದ್ದು, ಇದೇ ತಿಂಗಳ 30, 31 ರಂದು ಬೆಳಗ್ಗೆ 10.30 ಕ್ಕೆ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಪ್ರತಿಭಟನೆ ಮಾಡಲು ನಿರ್ಧರಿಸಲಾಗಿದೆ. ಅಖಿಲ ಭಾರತ ಮುಷ್ಕರಕ್ಕೆ ಕರೆ ನೀಡಿರುವುದರಿಂದ ಆಯಾ ಜಿಲ್ಲೆ, ರಾಜ್ಯದಲ್ಲಿ ಮುಷ್ಕರ ನಡೆಸಲು ನಿರ್ಧರಿಸಲಾಗಿದೆ.

ಹಾಗಗಿ ಬ್ಯಾಂಕ್ ನಲ್ಲಿ ನಿಮ್ಮ ಕೆಲಸ ಏನೇ ಇರಲಿ ಇಂದೆ ಅವುಗಳನ್ನು ಮಾಡಿಕೊಂಡರೆ ಉತ್ತಮ ಹಾಗೇ ನಿಮ್ಮ ಪಾಕೆಟ್ ನಲ್ಲಿ ನಿಮ್ಮ ಖರ್ಚಿಗೆ ಬೇಕಾಗುಷ್ಟು ಹಣವಿದ್ದರೆ ಉತ್ತಮ ಅಲ್ವೆ.!