ಬೆಂಗಳೂರು;ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಆಗಲೇ ನಾಯಕ ಆಗುವುದು ಎಂದು ನಟ ಶಿವರಾಜ್ ಕುಮಾರ್ ಹೇಳಿದ್ದಾರೆ.

ಸುದ್ದಿಗೋಷ್ಠಿ ಮಾತನಾಡಿದ ಅವರು ಸಾವಿರ ಜನರನ್ನು ಹಿಂದೆ ಇಟ್ಟುಕೊಂಡರಷ್ಟೇ ನಾಯಕನಾಗಲ್ಲ. ಎಲ್ಲರನ್ನೂ ಒಟ್ಟಾಗಿ ಕರೆದುಕೊಂಡು ಹೋಗಬೇಕು. ಆಗಲೇ ನಾಯಕ ಆಗುತ್ತಾರೆ.

ಇನ್ನು ಮುಂದೆ ನಾವೆಲ್ಲರೂ ಒಟ್ಟಾಗಿ ಹೋಗೋಣ. ಕನ್ನಡ ಚಿತ್ರರಂಗವನ್ನು ಮಾದರಿ ಚಿತ್ರರಂಗವನ್ನಾಗಿ ಮಾಡೋಣ. ಕೊರೋನಾ ದೊಡ್ಡ ವಿಷಯವೇ ಅಲ್ಲ, ಮಾಸ್ಕ್ ಧರಿಸುವ ಮತ್ತು ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ನಿಯಂತ್ರಿಸಬಹುದು ಎಂದರು.