ಕೋಲಾರ: ಹೈಕಮಾಂಡ್ ಸೂಚನೆಯಂತೆ ಸಚಿವ ಸಂಪುಟ ವಿಸ್ತರಣೆಯಾಗುತ್ತಿದೆ. ವಲಸೆ ಹಾಗೂ ಮೂಲ ಬಿಜೆಪಿಯ ಹಿರಿಯ ಶಾಸಕರಿಗೆ ಅವಕಾಶ ನೀಡಲಾಗುತ್ತಿದೆ.
ಹಿರಿಯ ಶಾಸಕರು ಮಂತ್ರಿಯಾಗಬೇಕೆ0ದು ಆಸೆ ಪಟ್ಟಿದ್ದಾರೆ.

ಮುಖ್ಯಮಂತ್ರಿಗಳು ಹಾಗೂ ರಾಜ್ಯಾಧ್ಯಕ್ಷರು ತೀರ್ಮಾನ ಕೈಗೊಳ್ಳಬೇಕಿದೆ. ಮುನಿರತ್ನ ಅವರನ್ನು ಸೇರಿಸಿಕೊಳ್ಳುವ, ಕೈ ಬಿಡುವ ಬಗ್ಗೆ ತಿಳಿದಿಲ್ಲ ಎಂದು ಬುಧವಾರ ಕೋಲಾರದ ಬಂಗಾರಪೇಟೆಯಲ್ಲಿ ಮಾತನಾಡಿದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು.

ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಎಂ. ಪಿ. ರೇಣುಕಾಚಾರ್ಯ ಅವರ ಹೇಳಿಕೆಗಳು ವೈಯಕ್ತಿಕವಾದದ್ದು. ಅವರಿಬ್ಬರ ಹೇಳಿಕೆಗೂ ಪಕ್ಷಕ್ಕೂ ಸಂಬ0ಧವಿಲ್ಲ.
ಜಿ. ಎಚ್. ತಿಪ್ಪಾರೆಡ್ಡಿ ಅವರ ಹೇಳಿಕೆಗಳು ಸಹ ವೈಯಕ್ತಿಕ. ವೈಯಕ್ತಿಕವಾಗಿ ಎಲ್ಲರೂ ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ. ಯಾರ ವಿರುದ್ದ ಹೇಳಿಕೆ ಕೊಟ್ಟರು ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಎಲ್ಲರನ್ನೂ ಸಮಾಧಾನಪಡಿಸುವ ಕೆಲಸ ಹಿರಿಯ ನಾಯಕರು ಮಾಡುತ್ತಾರೆ ಎಂದು ಶ್ರೀರಾಮುಲು ಹೇಳಿದರು.