ನವದೆಹಲಿ: 2021ರ ಜನವರಿ 1ರಿಂದ ಎಲ್ಲಾ ನಾಲ್ಕು ಚಕ್ರದ ವಾಹನಗಳಿಗೆ ಫಾಸ್ಟ್ ಟ್ಯಾಗ್ ಅಳವಡಿಕೆ ಕಡ್ಡಾಯಗೊಳಿಸಿದೆ ಎಂದು  ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಹೇಳಿದೆ.

2021 ರ ಜನವರಿ 1 ರಿಂದ ಟೋಲ್ ಪ್ಲಾಜಾಗಳಲ್ಲಿನ ನಗದು ಶುಲ್ಕ ಪಾವತಿಸುವ ವ್ಯವಸ್ಥೆಯನ್ನು ರದ್ದು ಮಾಡಲಾಗುತ್ತಿದ್ದು, ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯಗೊಳಿಸಲಾಗಿದೆ. ವಾಹನ ದಟ್ಟಣೆ ಕಡಿಮೆ ಮಾಡುವುದು, ಇಂಧನ ಉಳಿತಾಯ ಸೇರಿ ಇನ್ನಿತರ ಕಾರಣಗಳಿಂದಾಗಿ ಟೋಲ್ ಶುಲ್ಕವನ್ನು ಫ್ಯಾಸ್ಟ್ಯಾಗ್ ಮೂಲಕ ಪಾವತಿಸುವ ವ್ಯವಸ್ಥೆ ಜಾರಿಗೊಳಿಸಲಾಗಿದೆ. ಒಂದು ವೇಳೆ ಫಾಸ್ಟ್ಯಾಗ್ ಇಲ್ಲದ ವಾಹನಗಳು ಫಾಸ್ಟ್ಯಾಗ್ ಪಥದಲ್ಲಿ ಸಂಚರಿಸಿದರೆ, ದುಪ್ಪಟ್ಟು ಶುಲ್ಕ ಪಾವತಿಸಿ ತೆರಳುವ ನಿಯಮ ಜಾರಿಗೊಳಿಸಲಾಗಿದೆ.

ಕೇಂದ್ರ ಮೋಟಾರು ವಾಹನ ಕಾಯ್ದೆ 1981ರ ತಿದ್ದುಪಡಿಯಂತೆ 2017ರ ಡಿಸೆಂಬರ್ 1ಕ್ಕೆ ಮುನ್ನ ಮಾರಾಟವಾಗಿರುವ ಎಲ್ಲಾ ‘ಎಂ’ ಮತ್ತು ‘ಎನ್’ ವರ್ಗದ ಹಳೆಯ ಮೋಟಾರು ವಾಹನಗಳಿಗೂ(ದ್ವಿಚಕ್ರ ವಾಹನಗಳಿಗೆ) ಫಾಸ್ಟ್ ಟ್ಯಾಗ್ ಕಡ್ಡಾಯವಾಗಿದೆ.