ಮಂಡ್ಯ : ಎಸಿಬಿ ಮುಚ್ಚಿ, ಬಲಿಷ್ಠ ಲೋಕಾಯುಕ್ತ ಸಂಸ್ಥೆಯನ್ನು ಪುನಃ ಸ್ಥಾಪಿಸಿ ಪ್ರಣಾಳಿಕೆಯಲ್ಲಿ ಹೇಳಿದಂತೆ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಅವರು ಮೊದಲು ಮಾತು ಉಳಿಸಿಕೊಳ್ಳಲಿ ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗಡೆ ಹೇಳಿದ್ದಾರೆ.

ಮಂಡ್ಯದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಭ್ರಷ್ಟಾಚಾರದ ವಿರುದ್ಧ ಹೋರಾಟಕ್ಕೆ ಒಂದು ಸ್ವತಂತ್ರ ಸಂಸ್ಥೆ ಬೇಕು. ಆದರೆ ಎಸಿಬಿ ಸ್ವತಂತ್ರ ಸಂಸ್ಥೆಯಲ್ಲ. ನಾನು ಕೊಟ್ಟ ವರದಿಯ ಮೇಲೆಯೇ ಕಾಂಗ್ರೆಸ್ ಬಳ್ಳಾರಿಗೆ ಪಾದಯಾತ್ರೆ ಮಾಡಿತ್ತು. ಆದರೆ ಅಧಿಕಾರಕ್ಕೆ ಬಂದ ನಂತರ ಸಂಸ್ಥೆಯನ್ನು ದುರ್ಬಲ ಮಾಡಿತು ಎಂದು ಆಕ್ರೋಶ ವ್ಯಕ್ತಪಡಿಸಿದರು. ಇಂದಿನ ರಾಜಕೀಯ ಪರಿಸ್ಥಿತಿ ಬೇರೆ, ಸರ್ಕಾರ ಉಳಿಯುತ್ತೋ ಇಲ್ಲವೋ ಗೊತ್ತಿಲ್ಲ, ಮುಂದೆ ಬರೋ ಸರ್ಕಾರ ಇದಕ್ಕಿಂತ ಉತ್ತಮವೋ ಇಲ್ಲವೋ ಗೊತ್ತಿಲ್ಲ. ಆದರೆ ಜನರು ಎಚ್ಚೆತ್ತುಕೊಂಡರ ಎಲ್ಲವೂ ಸರಿ ಆಗುತ್ತೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ನ್ಯಾ. ಸಂತೋಷ್ ಹೆಗಡೆ.