ಬೆಂಗಳೂರು: ರಾಜ್ಯಾದ್ಯಂತ 25ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದ್ದು, ಈ ನಡುವೆ ಕೆಲವು ಮಂದಿ ಕಿಡಿಗೇಡಿಗಳು ಪರೀಕ್ಷೆ ರದ್ದು ಮಾಡಿರೋದಾಗಿ ಸೋಶೀಯಲ್‌ ಮೀಡಿಯಾದಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿದ್ದು, ಇದರಿಂದ ಮಕ್ಕಳಲ್ಲಿ ಮಾನಸಿಕವಾಗಿ ಗೊಂದಲ ಉಂಟು ಮಾಡಿದೆ. ಅದಕ್ಕೆ ಸಂಬಂಧಸಿದಂತೆ ಪರೀಕ್ಷಾ ಮಂಡಳಿ ಏನು ಹೇಳಿದೆ ಅಂದ್ರೆ.

ಈ ಬಾರಿಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಈ ಮೊದಲು ನಿಗದಿಯಂತೆ ನಡೆಲಿದೆ ಅಂತ ಹೇಳಿದ್ದು, ಈ ಮೂಲಕ ಮಕ್ಕಳಲ್ಲಿ ಆತ್ಮವಿಶ್ವಾಸ ತುಂಬಿದೆ. ಅಂದ ಹಾಗೇ ಈ ಬಾರಿ ಒಟ್ಟು 8.4 ಲಕ್ಷ ವಿದ್ಯಾರ್ಥಿಗಳು ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗೆ ಹಾಜರಾಗಲಿದ್ದು, ಈ ಸಲುವಾಗಿ ರಾಜ್ಯಾದ್ಯಂತ ಒಟ್ಟು 8,500 ಕೊಠಡಿಗಳನ್ನ ಕಾಯ್ದಿರಿಸಲಾಗಿದ್ದು, ಎಲ್ಲಾ ರೀತಿಯ ಮುನ್ನಚ್ಚರಿಕೆ ಕ್ರಮಗಳನ್ನು ಆಯಾ ಶಾಲೆಗಳಲ್ಲಿ ಮಾಡಿಕೊಳ್ಳಲಾಗುತ್ತಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷಾ ಮಂಡಳಿ ಸಷ್ಟನೆ ನೀಡಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳ ವೇಳಪಟ್ಟಿ ಹೀಗಿದೆ.

ಜೂನ್ 25: ಗುರುವಾರ -ದ್ವಿತೀಯ ಭಾಷೆ ಇಂಗ್ಲಿಷ್, ಕನ್ನಡ – ಬೆಳಗ್ಗೆ- 10.30ರಿಂದ ಮಧ್ಯಾಹ್ನ 1.30ರವರೆಗೆ
ಜೂನ್ 26: ಶುಕ್ರವಾರ- ಕೋರ್ ಸಬ್ಜೆಕ್​- ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಆಯಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಟು (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಇಂಜಿನಿಯರಿಂಗ್ ಗ್ರಾಫಿಕ್ಸ್ ಟು (ಮಧ್ಯಾಹ್ನ 2ರಿಂದ ಸಂಜೆ 5.15ರವರೆಗೆ), ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45), ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥಶಾಸ್ತ್ರ – ಬೆಳಗ್ಗೆ 10.30ರಿಂದ 1.45

ಜೂನ್ 27: ಶನಿವಾರ – ಗಣಿತ, ಸಮಾಜಶಾಸ್ತ್ರ, – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45

ಜೂನ್ 29: ಸೋಮವಾರ- ವಿಜ್ಞಾನ, ರಾಜ್ಯಶಾಸ್ತ್ರ(ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45) ಕರ್ನಾಟಕ ಹಿಂದೂಸ್ತಾನಿ ಸಂಗೀತ- (ಮಧ್ಯಾಹ್ನ 2ರಿಂದ ಸಂಜೆ 5.15)

ಜುಲೈ 1: ಬುಧವಾರ- ಸಮಾಜ ವಿಜ್ಞಾನ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45

ಜುಲೈ 2: ಗುರುವಾರ- ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, ಸಂಸ್ಕೃತ – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.45

ಜುಲೈ 3: ಶುಕ್ರವಾರ ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲಿಷ್, ಆರೇಬಿಕ್, ಪರ್ಶಿಯನ್, ಉರ್ದು, ಸಂಸ್ಕೃತ, ಕೊಂಕಣಿ, ತುಳು – ಬೆಳಗ್ಗೆ 10.30ರಿಂದ ಮಧ್ಯಾಹ್ನ 1.30

ಜುಲೈ 4: ಜೆಟಿಎಸ್ (JTS) ಅಭ್ಯರ್ಥಿಗಳಿಗೆ ಪ್ರಾಯೋಗಿಕ ಮತ್ತು ಮೌಖಿಕ ಪರೀಕ್ಷೆ

( ಸಾಂದರ್ಭಿಕ ಚಿತ್ರ)