ದೇಶದಲ್ಲಿ ಕೇಂದ್ರ ಸರ್ಕಾರ ಲಾಕ್ ಡೌನ್ ಜಾರಿ ಮಾಡಿದ್ದರಿಂದ ನಿಗದಿಯಾಗಿದ್ದ 10ನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಇದೀಗ 10ನೇ ತರಗತಿ ಪರೀಕ್ಷೆಗಳನ್ನು ಜೂನ್ 25ರಿಂದ ಪ್ರಾರಂಭವಾಗಲಿದೆ.

ಹಾಗಾಗಿ ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಲಾಗಿದ್ದು, ವಿದ್ಯಾರ್ಥಿಗಳು ಪರೀಕ್ಷಾ ಕೊಠಡಿಗೆ ತೆರಳುವ ಮುನ್ನ ಥರ್ಮಲ್ ಸ್ಕ್ರೀನಿಂಗ್ ಮಾಡುವುದರ ಜೊತೆಗೆ ಸ್ಯಾನಿಟೈಸರ್ ನೀಡಲಾಗುತ್ತದೆ.

ಇದರ ಮಧ್ಯೆ ವಕೀಲ ಎಂ. ಲೋಕೇಶ್ ಎಂಬವರು ಸೇರಿ ಮೂರು ಮಂದಿ ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ನಡುವೆ 10ನೇ ತರಗತಿ ಪರೀಕ್ಷೆ ನಡೆಸಲು ಮುಂದಾಗಿರುವ ಶಿಕ್ಷಣ ಇಲಾಖೆಯ ತೀರ್ಮಾನವನ್ನು ಪ್ರಶ್ನಿಸಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಹಾಕಲಾಗಿದೆ.

ಕೋರ್ಟ್ ಏನು ಹೇಳುತ್ತದೆ ಎಂಬುದುರ ಬಗ್ಗೆ ಕಾದು ನೋಡಬೇಕಿದೆ.