ಬೆಂಗಳೂರು: ರಾಜ್ಯಾದ್ಯಂತ ಜೂನ್ 25 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಪ್ರಾರಂಭವಾಗಲಿದೆ. ಹಾಗಾಗಿ  ಈ ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಉಚಿತ ಬಸ್‌ ಸೌಲಭ್ಯ ಕಲ್ಪಿಸಲಾಗುವುದು ಎಂದು ಡಿಸಿಎಂ ಲಕ್ಷ್ಮಣ ಸವದಿ ಹೇಳಿದ್ದಾರೆ.

ಅಗತ್ಯ ಬಿದ್ದರೆ ಗಡಿ ರಾಜ್ಯದ ಮಕ್ಕಳು ಪರೀಕ್ಷೆಗೆ ಬಂದು ಹೋಗಲು ಗಡಿ ಭಾಗದಿಂದ ಪರೀಕ್ಷಾ ಕೇಂದ್ರದವರೆಗೆ ಬಸ್‌ ವ್ಯವಸ್ಥೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ.