ಬೆಂಗಳೂರು : ರಾಜ್ಯದಲ್ಲೂ  10 ನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸುವ ಬಗ್ಗೆ ಸುದ್ದಿ ಹರಡಿಸಲಾಗಿದೆ, ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ಸುಳ್ಳು ಸುದ್ದಿ ಹರಡುವವರ ವಿರುದ್ಧ ಕೇಸ್ ದಾಖಲಿಸಲು ನಿರ್ಧರಿಸಿದೆ ಎಂದು   ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ.

ಕರ್ನಾಟಕದಲ್ಲಿ ಯಾವುದೇ ಕಾರಣಕ್ಕೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ರದ್ದು ಮಾಡಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿದ್ದಾರೆ. ಕರ್ನಾಟಕದಲ್ಲಿ ಜೂನ್ 25 ರಿಂದ ಜುಲೈ 4 ವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯಲಿದೆ.

ಅದಾಗಿ ಒಂದು ತಿಂಗಳಲ್ಲಿ ಮೌಲ್ಯಮಾಪನ ನಡೆಸಲಾಗುವುದು. ಶಾಲೆಗಳ ಪ್ರಾರಂಭದ ಬಗ್ಗೆ ಚರ್ಚೆ ನಡೆಯುತ್ತಿದೆ. ಪರೀಕ್ಷೆ ನಡೆಯುವ ಶಾಲೆಗೆ ಸ್ಯಾನಿಟೈಸ್ ಮಾಡಲಾಗುವುದು ಎಂದು ಸುರೇಶ್ ಕುಮಾರ್  ಹೇಳಿದ್ದಾರೆ.