ಬೆಂಗಳೂರು : ಎಸ್‌ಎಸ್ ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಮತ್ತೊಂದು ಸಿಹಿಸುದ್ದಿಯೊಂದನ್ನು ನೀಡಲು ಮುಂದಾಗಿದ್ದು, ಲಾಕ್ ಡೌನ್ ನಿಂದ ರಾಜ್ಯದ ಬೇರೆ ಬೇರೆ ಊರುಗಳಲ್ಲಿ ಸಿಲುಕಿರುವ ವಿದ್ಯಾರ್ಥಿಗಳಿಗೆ ಅವರು ಇದ್ದಲ್ಲಿಯೇ ಪರೀಕ್ಷೆ ನಡೆಸಲು ನಿರ್ಧರಿಸಿದೆಯಂತೆ.!

ಕೊರೊನಾ ವೈರಸ್ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೇರೆ ಊರಿಗೆ ಉಳಿದುಕೊಂಡಿರುವ ಎಸ್‌ಎಸ್ ಎಲ್ ಸಿ ವಿದ್ಯಾರ್ಥಿಗಳು ರಾಜ್ಯದ ಯಾವುದೇ ಊರಿಗೆ ಹೋಗಿ ಉಳಿದುಕೊಂಡಿದ್ದರೂ ಆ ಊರಿನ ಸುತ್ತಲಿನ ಪರೀಕ್ಷಾ ಕೇಂದ್ರವನ್ನು ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಹೇಳಲಾಗಿದೆ.

ಇನ್ನು ಕೊರೊನಾ ವೈರಸ್ ಜೂನ್ ತಿಂಗಳಲ್ಲಿ ನಿಯಂತ್ರಣಕ್ಕೆ ಬಂದರೆ ಮುಖ್ಯ ಶಿಕ್ಷಕರು ನೀಡಿರುವ ಮಾಹಿತಿ ಮೇರೆಗೆ ಬೇರೆ ಊರುಗಳಿಗೆ ಹೋಗಿರುವ ವಿದ್ಯಾರ್ಥಿಗಳನ್ನು ಕರೆತರಲು ವಿಶೇಷ ಪಾಸ್ ವ್ಯವಸ್ಥೆಗೆ ಪರೀಕ್ಷಾ ಮಂಡಳಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ.