ಚಿತ್ರದುರ್ಗ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ವತಿಯಿಂದ ಉದ್ಯೋಗಿನಿ ಯೋಜನೆಯಡಿ ಪ.ಜಾತಿ ಮತ್ತು ಪ.ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ ಅರ್ಜಿ ಸಲ್ಲಿಸಲು ಜೂ.25 ಕೊನೆ ದಿನ.

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದಿಂದ ಅನುಷ್ಠಾನಗೊಳಿಸುತ್ತಿರುವ ಉದ್ಯೋಗಿನಿ ಯೋಜನೆಯಡಿ ಪ್ರಸಕ್ತ ಸಾಲಿನ ಪ.ಜಾತಿ ಮತ್ತು ಪ.ಪಂಗಡ ಉಪಯೋಜನೆಯಡಿ ಬಳಕೆಯಾಗದ ಅನುದಾನದಲ್ಲಿ ಪ.ಜಾತಿ ಮತ್ತು ಪ.ಪಂಗಡದ ಮಹಿಳೆಯರಿಗೆ ಆದಾಯೋತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕ್ ಮುಖಾಂತರ 01 ಲಕ್ಷ ದಿಂದ ಗರಿಷ್ಟ 05 ಲಕ್ಷ ರೂ. ಗಳವರೆಗೆ ಸಾಲ ಹಾಗೂ ನಿಗಮದಿಂದ ಸಹಾಯಧನ ಪಡೆಯಬಹುದಾಗಿರುತ್ತದೆ. ಜಿಲ್ಲೆಗೆ ಪ.ಜಾತಿ-16 ಪ.ಪಂಗಡ -16 ಒಟ್ಟು 32 ಫಲಾನುಭವಿಗಳ ಗುರಿ ನಿಗದಿಪಡಿಸಿದ್ದು ಪ.ಜಾತಿ ಹಾಗೂ ಪ.ಪಂಗಡದ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.
ಅರ್ಹತೆ: 18 ರಿಂದ 55 ವರ್ಷದ ಒಳಗೆ ಇರುವ ಮಹಿಳೆಯರು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿದಾರರು ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿರಬೇಕು, ಅರ್ಜಿದಾರರ ಆದಾಯ 02 ಲಕ್ಷ ರೂ. ಮೀರಿರಬಾರದು. ಈ ಸೌಲಭ್ಯ ಪಡೆಯಲಿಚ್ಚಿಸುವವರು ಈ ಹಿಂದೆ ಬೇರೆ ಇಲಾಖೆಗಳಲ್ಲಿ ಯಾವುದೇ ಯೋಜನೆಗಳಡಿ ಸಾಲ ಸೌಲಭ್ಯ ಪಡೆದಿರಬಾರದು.  ಇಡಿಪಿ ತರಬೇತಿ ಕಡ್ಡಾಯವಾಗಿದ್ದು ಸಾಲ ಮಂಜೂರಾದ ಫಲಾನುಭವಿಗಳಿಗೆ ಇಡಿಪಿ ತರಬೇತಿ ಪಡೆದ ನಂತರವೇ ಸಹಾಯಧನ ಬಿಡುಗಡೆ ಮಾಡಲಾಗುವುದು. ಯೋಜನೆಯಡಿ ಈ ಹಿಂದೆ ಸೌಲಭ್ಯ ಪಡೆದ ಮಹಿಳೆಯರು ಪುನಃ ಅರ್ಜಿ ಸಲ್ಲಿಸುವಂತಿಲ್ಲ.

ಆಯಾ ತಾಲ್ಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಅರ್ಜಿ ನಮೂನೆ ಲಭ್ಯವಿದೆ. ಅರ್ಜಿ ಭರ್ತಿ ಮಾಡಿ, ಅರ್ಹ ದಾಖಲೆಗಳೊಂದಿಗೆ ಜೂ.25 ರಂದು ಸಂಜೆ 5.30 ರೊಳಗೆ ಆಯಾ ತಾಲ್ಲೂಕಿನ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ  ಚಿತ್ರದುರ್ಗ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ 08194-235958, ಚಳ್ಳಕೆರೆ 08135-250291, ಹೊಳಲ್ಕೆರೆ 08191-275250, ಹೊಸದುರ್ಗ 08199-230210, ಹಿರಿಯೂರು 08193-263512, ಮೊಳಕಾಲ್ಮೂರು 08198-229565 ಕ್ಕೆ ಸಂಪರ್ಕಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.