ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗವು ಇತ್ತೀಚೆಗೆ ಮಹತ್ವದ ಪ್ರಕಟಣೆಯೊಂದನ್ನು ಹೊರಡಿಸಿದೆ.

2017-18ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ಭರ್ತಿಗೆ ಈ ಹಿಂದೆ ಅರ್ಜಿ ಆಹ್ವಾನಿಸಲಾಗಿತ್ತು. ನಿಗದಿಪಡಿಸಿದ ಗ್ರೂಪ್ ಎ ಮತ್ತು ಬಿ ವೃಂದದ ಹುದ್ದೆಗಳಿಗೆ ಆ.24ರಂದು ಪೂರ್ವಭಾವಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ.

ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಆಯೋಗದ ವೆಬ್ ಸೈಟ್ ನಲ್ಲಿ ಲಾಗ್ ಇನ್ ಆಗಿ ಪ್ರವೇಶ ಪತ್ರಗಳನ್ನು ಡೌನ್ಲೋಡ್ ಮಾಡಿಕೊಳ್ಳುವಂತೆ ಪ್ರಕಟಣೆಯಲ್ಲಿ ಸೂಚಿಸಿದೆ.