ಬೆಂಗಳೂರು : ರಾಜ್ಯ ವಿಧಾನಸಭೆಯ ಚುನಾವಣಾ ವೇಳಾಪಟ್ಟಿಇದೇ ತಿಂಗಳ ಅಂತ್ಯದಲ್ಲಿ ಅಥವಾ ಬರುವ ಏಪ್ರಿಲ್ ಮೊದಲ ವಾರದಲ್ಲಿ ಪ್ರಕಟಗೊಳ್ಳಲಿದೆ.

ಈಗಾಗಲೇ ಚುನಾವಣಾ ಆಯೋಗವು ಎಲ್ಲ ಸಿದ್ಧತೆಗಳನ್ನೂ ಕೈಗೊಂಡಿದ್ದು, ಚುನಾವಣೆ ಎದುರಿಸಲು ರಾಜ್ಯ ಚುನಾವಣಾಧಿಕಾರಿಗಳ ಕಚೇರಿ ಸಜ್ಜಾಗಿದೆ. ಎರಡು ಅಥವಾ ಮೂರು ವಾರಗಳಲ್ಲಿ ವೇಳಾಪಟ್ಟಿಪ್ರಕಟಿಸಲಾಗುವುದು. ಬಹುತೇಕ ಮೇ ಮೊದಲ ವಾರದಲ್ಲಿ ಚುನಾವಣೆ ನಿಗದಿಯಾಗಬಹುದು ಎಂದು ಉನ್ನತ ಮೂಲಗಳು ತಿಳಿಸಿವೆ.

ಚುನಾವಣೆ ನಡೆಸಲು ಬೇಕಾದ ಎಲ್ಲ ಸಿದ್ಧತೆಗಳನ್ನೂ ಕೈಗೊಳ್ಳುತ್ತಿದ್ದು, ಅಂತಿಮ ಹಂತದಲ್ಲಿದ್ದೇವೆ. ಚುನಾವಣೆ ಎದುರಿಸಲು ಸಕಲ ರೀತಿಯಲ್ಲಿ ಸಜ್ಜಾಗಿದ್ದೇವೆ. ಆದರೆ, ಚುನಾವಣೆಯ ವೇಳಾಪಟ್ಟಿನಿರ್ಧರಿಸುವುದು ಕೇಂದ್ರ ಚುನಾವಣಾ ಆಯೋಗ. ಬಹುತೇಕ ಈ ತಿಂಗಳ ಅಂತ್ಯದಲ್ಲಿ ಅಥವಾ ಏಪ್ರಿಲ್ ಮೊದಲ ವಾರ ವೇಳಾಪಟ್ಟಿಘೋಷಣೆಯಾಗಬಹುದು ಎಂಬ ಮಾಹಿತಿಯಿದೆಯಾದರೂ ಖಚಿತವಾಗಿಲ್ಲ’ ಎಂದು ಆಯೋಗದ ಅಧಿಕಾರಿಗಳು ತಿಳಿಸಿದ್ದಾರೆ ಎಂದು ತಿಳಿದುಬಂದಿದೆ.