ಬೆಂಗಳೂರು :  ಮೈಸೂರಿನಲ್ಲಿ ಮಾ. 25 ರಂದು ನಡೆಯುವ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸಮಾವೇಶದಲ್ಲಿ ಜೆಡಿಎಸ್ ನ ಏಳು ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ ಆಗುತ್ತಾರೆ.

ಈ ವಿಷಯವನ್ನು  ಜೆಡಿಎಸ್ ಶಾಸಕ ಇಕ್ಬಾಲ್ ಅನ್ಸಾರಿ ಕೊಪ್ಪಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ.  ಮೈಸೂರಿನಲ್ಲಿ ನಡೆಯುವ ಸಮಾವೇಶದಲ್ಲಿ ಜಮೀರ್ ಅಹ್ಮದ್ ನೇತೃತ್ವದಲ್ಲಿ ಕಾಂಗ್ರೆಸ್ ಸೇರ್ಪಡೆಗೆ ಸಿದ್ದತೆಗಳು ನಡೆಯುತ್ತಿವೆ. ಈಗಾಗಲೇ 7 ಶಾಸಕರು ಕಾಂಗ್ರೆಸ್ ಸೇರುವ ಕುರಿತು ಚರ್ಚಿಸಿದ್ದೇವೆ ಎಂದರು.

ಬಹುತೇಕ ಅಂದೇ ಮಾ. 25 ರ ಕಾಂಗ್ರೆಸ್ ಸಮಾವೇಶದಲ್ಲಿ ಬಂಡಾಯ ಎಲ್ಲಾ  ಶಾಸಕರಿಗೆ ಅಂದೇ ಟಿಕೆಟ್ ಘೋಷಣೆಯಾಗುವ ಸಾಧ್ಯತೆ ಇದೆಯಂತೆ.?