ಚಿತ್ರದುರ್ಗ: ಅಖಿಲ ಭಾರತ ಕಾಂಗ್ರೇಸ್ ಪಕ್ಷದ ಅಧ್ಯಕ್ಷರು, ಬಾವಿ ಪ್ರಧಾನ ಮಂತ್ರಿಯಾದ ರಾಹುಲ್ ಗಾಂಧಿ ಏ. 4 ರಂದು ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣಕ್ಕೆ ಆಗಮಿಸುವುದರ ಮೂಲಕ ಜಿಲ್ಲೆಯ ಆರು ತಾಲ್ಲೂಕಿನ ಜನಾರ್ಶೀವಾದ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಸಚಿವ ಹೆಚ್ ಅಂಜನೇಯ ತಿಳಿಸಿದರು.
ಚಿತ್ರದುರ್ಗ ನಗರದಲ್ಲಿ ಶನಿವಾರ ಸುದ್ದಿಗೋಷ್ಟಿಯಲ್ಲಿ ಮಾಹಿತಿ ನೀಡಿದ ಅವರು, ಕಳೆದ 5 ವರ್ಷದಲ್ಲಿ ರಾಜ್ಯದಲ್ಲಿ ಉತ್ತಮವಾದ ಆಡಳಿತವನ್ನು ನೀಡಿದ ಸಿದ್ದರಾಮಯ್ಯ ಸರ್ಕಾರದ ಸಾಧನೆ ಮತ್ತು ಕಳೆದ 4 ವರ್ಷಗಳಲ್ಲಿ ಅಧಿಕಾರವನ್ನು ನಡೆಸಿದ ಕೇಂದ್ರ ಸರ್ಕಾರದ ವೈಫಲ್ಯಗಳನ್ನು ಮತದಾರರಿಗೆ ತಿಳಿಸುವ ಕಾರ್ಯವನ್ನು ಮಾಡಲಿದ್ದಾರೆ ಎಂದರು.
ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಲೋಕಸಭೆಯ ವಿರೋಧ ಪಕ್ಷದ ನಾಯಕರಾದ ಮಲ್ಲಿಕಾರ್ಜನ ಖರ್ಗೆ, ರಾಜ್ಯ ಉಸ್ತುವಾರಿ ವೇಣುಗೋಪಾಲ್, ಕೆ.ಪಿ.ಸಿ.ಸಿ. ಅಧ್ಯಕ್ಷ ಪರಮೇಶ್ವರ, ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ದಿನೇಶ್ ಗುಂಡುರಾವ್, ಆರ್.ಎಸ್. ಪಾಟೀಲ್ ಸೇರಿದಂತೆ ಇತರರು ಆಗಮಿಸಲಿದ್ದಾರೆ ಎಂದು ಸಚಿವ ಅಂಜನೇಯ ತಿಳಿಸಿದರು.