ಹೊಸಪೇಟೆ : ಸಹಕಾರ ಇಲಾಖೆಯಿಂದ ಮುಂಬರುವ ಆರು ತಿಂಗಳಲ್ಲಿ ಐದು ಸಾವಿರ ಜನರಿಗೆ ಉದ್ಯೋಗ ನೀಡಲಾಗುವುದು ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಭರವಸೆ ನೀಡಿದ್ದಾರೆ.

67 ನೇ ಸಹಕಾರ ಸಪ್ತಾಹ ಉದ್ಘಾಟಿಸಿ ಮಾತನಾಡಿದ ಸಚಿವ ಎಸ್.ಟಿ. ಸೋಮಶೇಖರ್, ಕೊರೊನಾ ಲಾಕ್ ಡೌನ್ ನಿಂದ ಹಲವು ಮಂದಿ ಉದ್ಯೋಗ ಕಳೆದುಕೊಂಡು ಸಂಕಷ್ಟದಲ್ಲಿದ್ದಾರೆ. ಅಂತಹವರಿಗೆ ಕರ್ನಾಟಕ ಹಾಲು ಮಹಾಮಂಡಳ, ಡಿಸಿಸಿ ಬ್ಯಾಂಕ್, ಸಹಕಾರ ಸಂಸ್ಥೆಗಳ ಮೂಲಕ ಉದ್ಯೋಗ ನೀಡಲಾಗುವುದು 2021 ರ ಮೇ ಒಳಗೆ ಒಟ್ಟು 5 ಸಾವಿರ ಜನರಿಗೆ ಉದ್ಯೋಗ ನೀಡಲಾಗುವುದು ಎಂದು ತಿಳಿಸಿದ್ದಾರೆ.