ವಿಜಯಪುರ: ಬೆಳಗಿನ ಜಾವ ದುಷ್ಕರ್ಮಿಗಳ ಗುಂಪೊಂದು ವಿಜಯಪುರ ಜಿಲ್ಲೆಯ ಸಿಂಧಗಿ ಪಟ್ಟಣದ ಐಸಿಐಸಿಐ ಬ್ಯಾಂಕ್ ಎಟಿಎಂನಲ್ಲಿ ಭದ್ರತಾ ಸಿಬ್ಬಂದಿಯಾಗಿ ಕೆಲಸ ಮಾಡುತ್ತಿದ್ದ ರಾಹುಲ್ ಎಂಬ ಯುವಕನನ್ನು ಹತ್ಯೆ ಮಾಡಿ ಹಣ ದೋಚಿಕೊಂಡು ಪರಾರಿಯಾಗಿದೆ.

ಭದ್ರತಾ ಸಿಬ್ಬಂದಿ ತಲೆಗೆ ಸುತ್ತಿಗೆಯಿಂದ ಹೊಡೆದು ಕೃತ್ಯ ಎಸಗಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪಟ್ಟಣದಲ್ಲಿ ಆತಂಕ ನಿರ್ಮಾಣವಾಗಿದ್ದು, ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಗಳನ್ನು ಶೀಘ್ರವೇ ಬಂಧಿಸುವ ಭರವಸೆ ನೀಡಿದ್ದಾರೆ.