ಚಾಮರಾಜನಗರ: ತಲೆಗೆ ಗುಂಡು ಹಾರಿಸಿಕೊಂಡು ಒಂದೇ ಕುಟುಂಬದ ಐವರು ಸಾಮೂಹಿಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ  ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆಯಲ್ಲಿ ನಡೆದಿದೆ.!

ನಿನ್ನೆ ರಾತ್ರಿ ಮೈಸೂರಿನಿಂದ ಬಂದಿದ್ದ ಕುಟುಂಬವು ಗುಂಡ್ಲುಪೇಟೆಯ ನಂದಿ ಲಾಡ್ಜ್ನಲ್ಲಿ ವಾಸ್ಯವ್ಯ ಹೂಡಿದ್ದರು. ಓಂಪ್ರಕಾಶ್ ಎಂಬ ಹೆಸರಿಲ್ಲಿ ರೂಂ ಬುಕ್ ಮಾಡಲಾಗಿತ್ತು ಎಂದು ತಿಳಿದುಬಂದಿದೆ.

ಬೆಳಗಿನ ಜಾವ ಪಟ್ಟಣದ ಹೊರವಲಯಕ್ಕೆ ಬಂದು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ

ಆತ್ಮಹತ್ಯೆಯಲ್ಲಿ ಇಬ್ಬರು ಮಹಿಳೆಯರು ಹಾಗೂ ಇಬ್ಬರು ಪುರುಷರು ಮತ್ತು ಬಾಲಕ ಸೇರಿ ಒಟ್ಟು ಐವರು ಸೇರಿದ್ದಾರೆ. ಕಾರಣ ಏನೆಂದು ತಿಳಿದು ಬಂದಿಲ್ಲ.