ವಿಜಯಪುರ: ಬಸವಣ್ಣರ ನಾಡು ಎಂದೇ ಖ್ಯಾತಿ ಪಡೆದಿರುವ ವಿಜಯಪುರದಲ್ಲಿ ಪ್ರಧಾನಿ ನರೇಂದ್ರಮೋದಿ ಮತ್ತು ಯುಪಿಎ ಅಧ್ಯಕ್ಷೆ ಸೋನಿಯಾಗಾಂಧಿ ಅಬ್ಬರ ಪ್ರಚಾರ ನಡೆಸುತ್ತಿದ್ದಾರೆ

ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ್ ತವರು ಕ್ಶೇತ್ರ ಬಬಲೇಶ್ವರದ ಸಾರವಾಡದಲ್ಲಿ ಪ್ರಧಾನಿ ನರೇಂದ್ರ ಮೋದಿ ಪ್ರಚಾರ ಕೈಗೊಳ್ಳಲಿದ್ದು, 2.5 ಲಕ್ಷ ಜನ ಸಮಾವೇಶದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

ಎಂ. ಬಿ. ಪಾಟೀಲ ಅಧ್ಯಕ್ಷರಾಗಿರುವ ಪ್ರತಿಷ್ಠಿತ ಬಿಎಲ್‌ಡಿಇ ಸಂಸ್ಥೆಯ ಹೊಸ ಆವರಣದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಕೂಡ ಕಾಂಗ್ರೆಸ್ ಅಭ್ಯರ್ಥಿಗಳ ಪರ ಪ್ರಚಾರ ಕೈಗೊಳ್ಳಲಿದ್ದಾರೆ. 2.5 ಲಕ್ಷ ಜನ ಪಾಲ್ಗೊಳ್ಳಲಿದ್ದಾರೆ ಎಂದು ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ್ ಮಾಧ್ಯಮಗಳಿಗೆ ತಿಳಿಸಿದ್ದಾರೆ.