ಬೆಂಗಳೂರು: ರಾಜ್ಯ ಎಲ್ಲಾ ಕ್ಷೇತ್ರಗಳಿಗೂ ಒಂದೇ ಹಂತದಲ್ಲಿ ಚುನಾವಣೆ ನಡೆಸುವಂತೆ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಸಂಜೀವ್ ಕುಮಾರ್ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದು ಹೇಳಿದ್ದಾರೆ.

ಮಾಧ್ಯಮದವರ ಜೊತೆ ಮಾತನಾಡಿದ ಸಂಜೀವ್ ಕುಮಾರ್. ಅವರು ಒಂದೇ ಹಂತದಲ್ಲಿ ಚುನಾವಣೆ ನಡೆದರೂ ಯಾವುದೇ ಸಮಸ್ಯೆ ಆಗದಂತೆ ನಿರ್ವಹಿಸುವ ಸಾಮರ್ಥ್ಯ ಇದೆ ಎಂದರು.

ಹಾಗಾಗಿ ರಾಜ್ಯದ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಮತದಾನ ನಡೆಸುವಂತೆ ರಾಜಕೀಯ ಪಕ್ಷಗಳು ಮನವಿ ಮಾಡಿರುವ ಹಿನ್ನೆಲೆ ಹಾಗೂ ಕಳೆದ ಬಾರಿಯೂ ಒಂದೇ ಹಂತದಲ್ಲಿ ಚುನಾವಣೆ ನಡೆದಿತ್ತು

ಆದ್ದರಿಂದ ಈ ಬಾರಿ ಚುನಾವಣೆಯು ಒಂದೇ ಹಂತದಲ್ಲಿ ನಡೆಯಲಿ ಎಂದು ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದರು.