ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಜಾರಿಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ತನ್ನ ನಿಲುವನ್ನು ಸ್ಪಷ್ಟಪಡಿಸಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.

ಒಳಮೀಸಲಾತಿ ವಿಚಾರದಲ್ಲಿ ತುಟಿಗೆ ತುಪ್ಪ ಸವರುವ ನೀತಿಗಳನ್ನು ಇನ್ನಾದರೂ ಬಿಡಬೇಕು ಒಳಮೀಸಲಾತಿ ಸರ್ವರಿಗೂ ಸಮಪಾಲು ಸಮಬಾಳು ಎಂಬ ಸಂವಿಧಾನಿಕ ಮೂಲ ಧಾತುವೇ ಆಗಿದ್ದು, ಅದನ್ನು ಜಾರಿಗೊಳಿಸುವಲ್ಲಿ ಸರ್ಕಾರ ಪರಿಶಿಷ್ಟ ಜಾತಿ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಜಾರಿಗೊಳಿಸಬೇಕು ಎಂದು ಟ್ವಿಟ್ಟಿಸಿದ್ದಾರೆ.