ಹಿರೇಕೆರೂರು: ಜೆಡಿಎಸ್ ಅಭ್ಯರ್ಥಿ ಆಗಿದ್ದ ಶಿವಾಚಾರ್ಯ ಸ್ವಾಮೀಜಿ ನಾಮಪತ್ರ ವಾಪಾಸ್ ಪಡೆಯಲಿದ್ದಾರೆ.!

ಹಿರೇಕೆರೂರು ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಮಣಿಸಲು ಜೆಡಿಎಸ್ ರಣತಂತ್ರ ರೂಪಿಸಿ, ರಟ್ಟಿಹಳ್ಳಿಯ ಕಬ್ಬಿನ ಮಠದ ಶಿವಲಿಂಗ ಶಿವಾಚಾರ್ಯ ಸ್ವಾಮೀಜಿ ಕಣಕ್ಕಿಳಿಸಿತ್ತು. ಆದರೆ ಸ್ವಾಮೀಜಿ ಇಂದು ಮಧ್ಯಾಹ್ನ ನಾಮಪತ್ರ ವಾಪಸ್ ಪಡೆಯಲಿದ್ದಾರೆ.

ಈ ಬಗ್ಗೆ ಸ್ಪಷ್ಟನೆ ನೀಡಿರುವ ಅವರು, ಹಿರಿಯ ಸ್ವಾಮೀಜಿಗಳ ಮಾರ್ಗದರ್ಶನದ ಮೇರೆಗೆ ನಾಮಪತ್ರ ವಾಪಾಸ್ ಪಡೆಯಲು ನಿರ್ಧರಿಸಿದ್ದೇನೆ ಎಂದಿದ್ದಾರೆ. ಈ ಮೂಲಕ ಜೆಡಿಎಸ್ ನಾಯಕರಿಗೆ ಶಾಕ್ ಆಗಿದೆಯಂತೆ.