ಬೆಂಗಳೂರು ; ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಉತ್ತರ ಕರ್ನಾಟಕ ಹಾಗೂ ಕಲ್ಯಾಣ ಕರ್ನಾಟಕಕ್ಕೆ ಆದ್ಯತೆ ನೀಡಿರುವ ಬಿಜೆಪಿ, ಈರಣ್ಣ ಕಡಾಡಿ ಹಾಗೂ ಅಶೋಕ್ ಗಸ್ತಿ ಅವರಿಗೆ ಟಿಕೆಟ್ ನೀಡಿದೆ.

ಹಾಲಿ ರಾಜ್ಯಸಭಾ ಸದಸ್ಯರಾದ ಪ್ರಭಾಕರ ಕೋರೆ, ರಮೇಶ್ ಕತ್ತಿ ಹಾಗೂ ಪ್ರಕಾಶ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದೆ.