ದಾವಣಗೆರೆ: ಸಚಿವ ಮಾಧುಸ್ವಾಮಿ ಅವರು ಕುರುಬ ಸಮುದಾಯದ ಬಗ್ಗೆ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಚಿವರು ಇಂದು ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಬೆಳ್ಳೂಡಿಯಲ್ಲಿರುವ ಕನಕ ಗುರುಪೀಠದ ಶಾಖಾಮಠಕ್ಕೆ ಭೇಟಿ ನೀಡಿದ್ದಾರೆ.

ಈ ವೇಳೆ ಶಾಖಾಮಠದ ಪೀಠಾಧಿಪತಿ ನಿರಂಜನಾನಂದಪುರಿ ಅವರೊಂದಿಗೆ ಮಾತುಕತೆಯನ್ನೂ ಕೂಡ ನಡೆಸಿದ್ದಾರೆ. ಜೊತೆಗೆ ಸಚಿವರಿಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರೂ ಕೂಡ ಸಾಥ್ ನೀಡಿದ್ದರು.! ಎಂಬ ಸುದ್ದಿ ಹರಿದಾಡುತ್ತಿದೆ.