ಬೆಂಗಳೂರು: ಹಿರಿಯ ಪೋಷಕ ನಟ ಹುಲಿವಾನ್ ಗಂಗಾಧರಯ್ಯ (70) ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಅವರಿಗೆ ಕೊರೋನಾ ಪಾಸಿಟಿವ್​ ದೃಢಪಟ್ಟು, ಚಿಕಿತ್ಸೆ ಪಡೆಯುತ್ತಿದ್ದರು. ಕಿರುತೆರೆಯ ಪ್ರೇಮಲೋಕ ಧಾರವಾಹಿಯಲ್ಲಿ ಅವರು ನಟಿಸುತ್ತಿದ್ದರು.

ಹಲವಾರು ಸಿನಿಮಾ, ಧಾರವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ನಟಿಸಿ ತಮ್ಮದೇ ಆದ ಛಾಪು ಮೂಡಿಸಿದ್ದರು. ರಂಗಭೂಮಿ, ಸಿನಿಮಾ, ಧಾರಾವಾಹಿ ಕ್ಷೇತ್ರಗಳಲ್ಲಿ ಗುರುತಿಸಿಕೊಂಡಿದ್ದ ಹುಲಿವಾನ್ ಗಂಗಾಧರಯ್ಯ ಇಂದು ಅಗಲಿದ್ದಾರೆ.